KEA Recruitment 2026: ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ 140 ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ! B.Ed, D.Ed ಪಾಸಾದವರಿಗೆ ಗುಡ್ ನ್ಯೂಸ್
ಸರ್ಕಾರಿ ಶಾಲಾ ಶಿಕ್ಷಕರಾಗುವ ಕನಸು ಕಾಣುತ್ತಿರುವ ಹಾಗೂ ಬಿ.ಎಡ್ (B.Ed), ಡಿ.ಎಡ್ (D.Ed) ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿರುವ ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಮತ್ತೊಂದು ಭರ್ಜರಿ ಸಿಹಿಸುದ್ದಿ ಹೊರಬಿದ್ದಿದೆ. ಸಮಾಜ ಕಲ್ಯಾಣ ಇಲಾಖೆಯ (Social Welfare Department) ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ಖಾಲಿ ಇರುವ 140 ಶಿಕ್ಷಕರ ಹುದ್ದೆಗಳ (SWRT Notification 2026) ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಕೃತವಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಇತ್ತೀಚೆಗಷ್ಟೇ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಶಿಕ್ಷಕರ ಹುದ್ದೆಗಳಿಗೆ ಅಧಿಸೂಚನೆ ಹೊರಬಿದ್ದ ಬೆನ್ನಲ್ಲೇ, ಇದೀಗ ವಸತಿ ಶಾಲೆಗಳ ನೇಮಕಾತಿಯೂ ಆರಂಭವಾಗಿರುವುದು ಉದ್ಯೋಗಾಕಾಂಕ್ಷಿಗಳಲ್ಲಿ ಹೊಸ ಭರವಸೆ ಮೂಡಿಸಿದೆ. ಈ ನೇಮಕಾತಿಯ ಹುದ್ದೆಗಳ ಹಂಚಿಕೆ, ಶೈಕ್ಷಣಿಕ ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರೆ ಪ್ರಮುಖ ವಿವರಗಳನ್ನು ಈ ಲೇಖನದಲ್ಲಿ ಒದಗಿಸಲಾಗಿದೆ. ಲೇಖನವನ್ನು ಸಂಪೂರ್ಣವಾಗಿ ಓದಿರಿ. ನೇಮಕಾತಿಯ ಸಂಕ್ಷಿಪ್ತ ವಿವರಣೆ ಇಲಾಖೆಯ ಹೆಸರು: ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ ನೇಮಕಾತಿ ಪ್ರಾಧಿಕಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಹುದ್ದೆಯ ಹೆಸರು: ವಸತಿ ಶಾಲಾ ಶಿಕ್ಷಕರು (Residential School Teachers) ಒಟ್ಟು ಖಾಲಿ ಹುದ್ದೆಗಳು: 140 ಹುದ್ದೆಗಳು ಉದ್ಯೋಗದ ಸ್ಥಳ: ಕರ್ನಾಟಕದಾದ್ಯಂತ ಇರುವ ಸಮಾಜ ಕಲ್ಯಾಣ ...